ಸುಳ್ಳು ಎಸ್.ಟಿ ನಾಯಕ ತಳವಾರ ಜಾತಿ ಪ್ರಮಾಣ ಪತ್ರಗಳನ್ನು ರದ್ದುಪಡಿಸಲು ಈಗಾಗಲೇ ಆದೇಶ ಮಾಡಲಾಗಿದ್ದು,ಯಾವುದೇ ಕಾರಣಕ್ಕೂ ಹಿಂದುಳಿದ ವರ್ಗದಲ್ಲಿ ಬರುವ ತಳವಾರ ಜಾತಿವರಿಗೆ ಎಸ್.ಟಿ ಪ್ರಮಾಣ ಪತ್ರವನ್ನು ನೀಡಬಾರದು ಕಳೆದ ಬೆಳಗಾವಿ ಅಧಿವೇಶನದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಎಮ್ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಸ್ಪಷ್ಟವಾಗಿ ಹೇಳಿದೆನೇ ಸಿಎಂ ಸಿದ್ದರಾಮಯ್ಯ
ಇಂದು ಬೆಂಗಳೂರು ಸಿಎಂ ರವರ ನಿವಾಸ ಕೃಷ್ಣಾದಲ್ಲಿ ಮಾಜಿ ಸಂಸದ ಶ್ರೀ ವಿಎಸ್ ಉಗ್ರಪ್ಪ ನವರ ನೇತೃತ್ವದಲ್ಲಿ ವಾಲ್ಮೀಕಿ ಸಮಾಜದ ಮುಖಂಡರು ಮತ್ತು ಶ್ರೀಗಳು ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟ, ಯಾದಗಿರಿ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಾಯ್ಕಡ ನಾಯಕ ತಳವಾರ ಹೆಸರಿನಲ್ಲಿ ಸುಮಾರು 2.5ಲಕ್ಷ ಸುಳ್ಳು ಜಾತಿ ಪ್ರಮಾಣ ಪತ್ರಗಳು ವಿತರಣೆ ಆಗಿ ನಿಜವಾದ ಎಸ್.ಟಿ ಜನಾಂಗದವರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ,ಈಗಾಗಲೇ ಸರ್ಕಾರ ವಾಲ್ಮೀಕಿ, ನಾಯಕ ಮತ್ತು ಬೇಡರ ಜನಾಂಗದಲ್ಲಿ ಬರುವ ನಾಯಕ ತಳವಾರ ಜಾತಿವರಿಗೆ ಮಾತ್ರ ಎಸ್.ಟಿ ಪ್ರಮಾಣ ಪತ್ರಗಳನ್ನು ನೀಡಬೇಕು ಹಿಂದುಳಿದ ವರ್ಗದಲ್ಲಿ ಬರುವ ತಳವಾರ ಜಾತಿವರಿಗೆ ಯಾವುದೇ ಕಾರಣಕ್ಕೂ ಎಸ್.ಟಿ ಪ್ರಮಾಣ ಪತ್ರಗಳನ್ನು ನೀಡಬಾರದು ಎಂದು ಆದೇಶಿಸಿದರು ಕೂಡ ಜನಪ್ರತಿನಿದಿಗಳು ಗ್ರೇಡ -2 ತಹಸೀಲ್ದಾರ ಅವರಿಗೆ ಹಿಂದುಳಿದ ವರ್ಗದ ಜನಾಂಗದವರಿಗೆ ಬರುವ ತಳವಾರ ಜಾತಿವರಿಗೆ ಎಸ್.ಟಿ ಪ್ರಮಾಣ ಪತ್ರಗಳನ್ನು ನೀಡಬೇಕು ಎಂದು ಒತ್ತಡ ಹಾಕುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಂಸದರಾದ ಶ್ರೀ ವಿ.ಎಸ್ ಉಗ್ರಪ್ಪನವರು, ಉತ್ತರ ಕರ್ನಾಟಕ ವಾಲ್ಮೀಕಿ ಸಮಾಜದ ಅಧ್ಯಕ್ಷ ಮಾರೆಪ್ಪ ನಾಯಕ ಮಗ್ದಂಪೂರ,ರಾಜ್ಯ ಎಸ್ ಸಿ/ಎಸ್ ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿಯ ರಾಜ್ಯಾಧ್ಯಕ್ಷ ಶ್ರವಣಕುಮಾರ ಡಿ ನಾಯಕ, ವಾಲ್ಮೀಕಿ ಸಮಾಜದ ಕಲಬುರಗಿ ವಿಭಾಗೀಯ ಅಧ್ಯಕ್ಷ ನಂದಕುಮಾರ ಮಾಲಿಪಾಟೀಲ ರವರು ದಾಖಲೆಗಳ ಸಮೇತವಾಗಿ ಒಂದು ಗಂಟೆಗೂ ಹೆಚ್ಚು ಗಂಭೀರವಾಗಿ ಚರ್ಚೆಸುವ ಮೂಲಕ ಸಿಎಂ ರವರ ಗಮನಕ್ಕೆ ತರಲಾಯಿತು.

ಇದಕ್ಕೆ ಸ್ಪಂದಿಸಿದ ಸಿಎಂ ರವರು ಸುಳ್ಳು ಎಸ್.ಟಿ ನಾಯಕ ತಳವಾರ ಜಾತಿ ಪ್ರಮಾಣ ಪತ್ರಗಳನ್ನು ರದ್ದುಪಡಿಸಲು ಈಗಾಗಲೇ ಆದೇಶ ಮಾಡಲಾಗಿದ್ದು, ಯಾವುದೇ ಕಾರಣಕ್ಕೂ ಹಿಂದುಳಿದ ವರ್ಗದಲ್ಲಿ ಬರುವ ತಳವಾರ ಜಾತಿವರಿಗೆ ಎಸ್.ಟಿ ಪ್ರಮಾಣ ಪತ್ರವನ್ನು ನೀಡಬಾರದು ಕಳೆದ ಬೆಳಗಾವಿ ಅಧಿವೇಶನದಲ್ಲಿ ಸಚಿವ ಪ್ರಿಯಾಂಕ ಖರ್ಗೆ,ಎಮ್ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಸ್ಪಷ್ಟವಾಗಿ ಹೇಳಿದೆನೇ ಆದರೂ ಕೂಡ ಈ ರೀತಿಯಾಗಿ ಅಧಿಕಾರಿಗಳ ಮೇಲೆ ಏಕೇ ಒತ್ತಡ ಏರುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು,ಸಭೆಯಲ್ಲಿ ಇದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಿಗೆ ಒಂದು ವೇಳೆ ಎಸ್ ಟಿ ಸುಳ್ಳು ಜಾತಿ ವಿತರಣೆ ಮಾಡುವ ಅಧಿಕಾರಿಗಳು & ತೆಗೆದುಕೊಳ್ಳುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಆದೇಶ ಮಾಡಿ,ಈ ಹಿಂದೆ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ರದ್ದುಪಡಿಸಲು ಹೈಕೋರ್ಟ್ ಮತ್ತು ರಾಜ್ಯ ಸರ್ಕಾರದ ಆದೇಶಗಳನ್ನು ಪಾಲನೆ ಮಾಡಲು ಖಡಕ್ ಆಗಿ ಆದೇಶ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ರಾಜ್ಯ ಎಸ್ ಸಿ/ಎಸ್ ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿ ವತಿಯಿಂದ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ತಳವಾರ ಜಾತಿ ಮರು ಸೇರ್ಪಡೆ ಮಾಡಬೇಕು & ಸುಳ್ಳು ಎಸ್.ಟಿ ನಾಯಕ ತಳವಾರ ಜಾತಿ ಪ್ರಮಾಣ ಪತ್ರಗಳನ್ನು ರದ್ದುಪಡಿಸದ ಜಿಲ್ಲಾಧಿಕಾರಿಗಳ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕೆಂದು ಮನವಿ ಪತ್ರ ನೀಡಲಾಯಿತು ಇದಕ್ಕೆ ಸ್ಪಂದಿಸಿದ ಸಿಎಂ ರವರು ಒಂದು ವಾರದಲ್ಲಿ ಸೂಕ್ತ ಕ್ರಮಕೈ ಗೊಳ್ಳುತ್ತೇವೆಂದು ಭರವಸೆ ನೀಡಿದರು.