ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಕ್ರಾಸ್ ಹೆದ್ದಾರಿಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ.ರಿ. ಸಂಘಟನೆ ವತಿಯಿಂದ ಇಂದು ಕರ್ನಾಟಕ ರಾಜ್ಯ ನೂತನ ಮುಖ್ಯಮಂತ್ರಿಗಳ ಸಚಿವ ಸಂಪುಟದಲ್ಲಿ ಮಾಜಿ ಸಚಿವರಾದ ಡಾ. ಎಚ್ ಸಿ ಮಾಹದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಉನ್ನತ ಸಚಿವ ಸ್ಥಾನವನ್ನು ನೀಡುವಂತೆ ಒತ್ತಾಯಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಕೂಡಲೇ ನಮ್ಮ ಮನವಿಗೆ ಸ್ಪಂದಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಮಾನಗಳು ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರವಹಿಸಿ ಮಾನ್ಯ ತಹಶೀಲ್ದಾರ್ ಗೆ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಸಂಚಾಲಕರಾದ ಶಿವುಪುತ್ರ ಜವಳಿ,ಚಂದಪ್ಪ ಮುನೆಪನೋರ, ಶಿವಲಿಂಗ ಹಸನಾಪುರ, ವೆಂಕಟೇಶ್ ಗ್ಯಾಂಗಿನ್ ಮರಿಯಪ್ಪ ಕ್ರಾಂತಿ, ಪೊಲೀಸ್ ಸಿಬ್ಬಂದಿ ವರ್ಗದವರು ಸಂಘಟನೆಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ವರದಿ. ಹುಲಿಗೆಶ್ ರಾಜವಾಳ