ಬಸವರಾಜ್ ಶಿ. ಪಡಶೆಟ್ಟಿ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಅಂಗವಿಕಲರಿಗೆ ಆಹಾರ ಸಾಮಗ್ರಿಗಳನ್ನು ಒದಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ, ಅಣವೀರಭದ್ರೇಶ್ವರ ಜಾತ್ರೆಗೆ ಪಾದಯಾತ್ರೆ ಕೈಗೊಳ್ಳುವ ಭಕ್ತಾದಿಗಳಿಗೆ ತಮ್ಮ ಗೆಳೆಯರೊಂದಿಗೆ ಸೇರಿ ಕುಡಿಯುವ ನೀರು, ಹಣ್ಣುಗಳು ಹಾಗೂ ಅನ್ನಪ್ರಸಾದದ ವ್ಯವಸ್ಥೆ ಮಾಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಅವರ ಈ ಸೇವಾ ಕಾರ್ಯಗಳನ್ನು ಪರಿಗಣಿಸಿ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಕಡಣಿ ಗ್ರಾಮ ಸೇರಿದಂತೆ ಆಲಮೇಲ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ.
ಅಭಿನಂದನೆಗಳ ಮಹಾಪೂರ
ಪ್ರಶಸ್ತಿಗೆ ಆಯ್ಕೆಯಾಗಿರುವ ಬಸವರಾಜ್ ಶಿ. ಪಡಶೆಟ್ಟಿ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಆಲಮೇಲ ತಾಲೂಕು ಸಮಿತಿಯ ಪದಾಧಿಕಾರಿಗಳು ಹಾಗೂ ಜನಮನ ಧ್ವನಿಸುದ್ದಿ ಕನ್ನಡ ನ್ಯೂಸ್‌ನ ವರದಿಗಾರರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.